ರಾಜಸ್ಥಾನ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್, ಜಾತಿ ಗಣತಿ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ನ ಪ್ರಣಾಳಿಕೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ, ಸಿಪಿ ಜೋಶಿ, ಸಚಿನ್ ಪೈಲಟ್ ಸೇರಿದಂತೆ ಪ್ರಮುಖರ ಉಪಸ್ಥಿತಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಪ್ರಣಾಳಿಕೆಯಲ್ಲಿನ ಮುಖ್ಯ ಅಂಶಗಳು

ಪ್ರತಿ ಗ್ರಾಮ ಮತ್ತು ನಗರ ವಾರ್ಡ್‌ಗಳಲ್ಲಿ ಭದ್ರತಾ ಸಿಬ್ಬಂದಿ ನಿಯೋಜನೆ

500 ರೂ.ಗೆ ಸಿಗುವ ಎಲ್‌ಪಿಜಿ ಸಿಲಿಂಡರ್‌ 400.ರೂ

ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿಕಾರರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡಲು ಮರ್ಚೆಂಟ್ ಕ್ರೆಡಿಟ್ ಕಾರ್ಡ್ ಯೋಜನೆ ಪ್ರಾರಂಭ

ಚಿರಂಜೀವಿ ಆರೋಗ್ಯ ವಿಮೆ ಮೊತ್ತ ₹25 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ.

ಸರ್ಕಾರಿ ಉದ್ಯೋಗಿಗಳಿಗೆ ಹಳೆ ಪಿಂಚಣಿ ಪಡೆಯಲು ಹೊಸ ಕಾನೂನು

ಆರ್‌ಟಿಇ ಕಾನೂನು ತರುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ 12ನೇ ತರಗತಿವರೆಗೆ ಉಚಿತ ಶಿಕ್ಷಣ

ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಅಥವಾ ಟ್ಯಾಬ್ಲೆಟ್

ಪ್ರಕೃತಿ ವಿಕೋಪದಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹15 ಲಕ್ಷದವರೆಗೆ ವಿಮೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!