ಕನಿಷ್ಠ ಪರಿಜ್ಞಾನ ಇಲ್ಲದ ಸಿಎಂ: ಪಾಕ್ ಜೊತೆ ಯುದ್ಧ ಅನಿವಾರ್ಯತೆ ಇಲ್ಲ ಎಂದ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪಾಕಿಸ್ತಾನದ ಜೊತೆಗೆ ಯುದ್ಧ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಮನಸ್ಥಿತಿ ಮುಸ್ಲಿಮರ ಮತ ಬಗ್ಗೆ ಯೋಚಿಸುತ್ತಿದೆ. ಹಾಗಾದರೆ ಸತ್ತಿರುವವರ ಪ್ರಾಣಕ್ಕೆ ಬೆಲೆಯೇ ಇಲ್ಲವೇ? ಎಂದು ವಾಗ್ದಾಳಿ ನಡೆಸಿದರು.

40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು ಎಂಟು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ, ಅನುಭವ ನಮ್ಮ ಸೇನಾಪಡೆಗಳಿವೆ. ಈ ವಿಷಯದಲ್ಲಿ ನಿಮ್ಮ ಸಲಹೆಯ ಅಗತ್ಯವೂ ಇಲ್ಲ, ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ.ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶಿ, ರೋಹಿಂಗ್ಯ, ಪಾಕಿಸ್ತಾನಿ ಅಕ್ರಮ ವಲಸಿಗರು ರಾಜಾರೋಷವಾಗಿ ತಿರುಗಾಡಿಕೊಂಡಿದ್ದಾರೆ. ಮೊದಲು ಅವರನ್ನ ಗುರುತಿಸಿ, ಗಡೀಪಾರು ಮಾಡಿ ಕನ್ನಡಿಗರ ಸುರಕ್ಷತೆ ಕಾಪಾಡುವ ಕಡೆ ಗಮನ ಕೊಡಿ. ಸುಮ್ಮನೆ ತಮ್ಮದಲ್ಲದ ವಿಷಯದಲ್ಲಿ ಅನಾವಶ್ಯಕವಾಗಿ ಮೂಗು ತೂರಿಸಬೇಡಿ ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!