ಶ್ವೇತಾ ಜ್ಯುವೆಲ್ಲರ್ ಮಾಲಿಕ, ದೈವಜ್ಞ ಬ್ರಾಹ್ಮಣ ಸಭಾದ ಕ್ರಿಯಾಶೀಲ ವ್ಯಕ್ತಿ ಲ. ಅಶೋಕ್ ಶೇಟ್ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶ್ವೇತಾ ಜ್ಯವೆಲ್ಲರಿ ಮಾಲಿಕ, ದೈವಜ್ಞ ಬ್ರಾಹ್ಮಣ ಸಮಾಜದ ಕ್ರಿಯಾಶೀಲ ವ್ಯಕ್ತಿತ್ವದ ಎಂ. ಅಶೋಕ್ ಶೇಟ್ ಹೃದಯಾಘಾತದಿಂದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಅವರಿಗೆ 64 ವರ್ಷ ವಯಸ್ಸಾಗಿತ್ತು.

ಅವರು ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದರು. ದೈವಜ್ಞ ಯುವಕ ಮಂಡಳಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಸೇವಾ ಸಂಸ್ಥೆ, ದೈವಜ್ಞ ಬ್ರಾಹ್ಮಣ ಸಂಘ, ಮುಂತಾದ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅಶೋಕ್ ಶೇಟ್, ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರನೀಯ.
ಅವರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!