ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದಿಂದ ವಿಧಾನ ಸಭೆ ಹಾಗೂ ವಿಧಾನ ಪರಿಷತ್ಗೆ ಮುಖ್ಯ ಸಚೇತಕರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ಮತ್ತು ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರನ್ನು ನೇಮಿಸಲಾಗಿದೆ.
ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಟಿಬಿ ಜಯಚಂದ್ರ ನೇಮಕವಾಗಿದ್ದಾರೆ.
ಇಂದಿನಿಂದ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಮುಖ್ಯ ಸಚೇತಕರ ಆಯ್ಕೆಯನ್ನು
ಮಾಡಲಾಗಿದೆ.