Friday, October 3, 2025

ಶ್ರೀನಗರದಲ್ಲಿ ಅಶೋಕ ಸ್ತಂಭ ದ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಹಜರತ್‌ಬಾಲ್ ದರ್ಗಾದ ಉದ್ಘಾಟನಾ ಫಲಕದ ಮೇಲಿದ್ದ ಭಾರತ ರಾಷ್ಟ್ರ ಲಾಂಛನ ಅಶೋಕ ಸ್ತಂಭ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

50 ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಘಟನೆಯಲ್ಲಿ ಭಾಗಿಯಾದವರಿಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯ ನಂತರ ನಡೆದ ಘಟನೆಯ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಕೃತ್ಯವೆಸಗಿದವರನ್ನು ಬಂಧಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೆ ಯಾರನ್ನೂ ಔಪಚಾರಿಕವಾಗಿ ಬಂಧಿಸಲಾಗಿಲ್ಲ. ಆದರೆ ಕೆಲವು ಜನರನ್ನು ಪ್ರಶ್ನಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂತೆಯೇ ಕಾನೂನಿನ ಪ್ರಕಾರ ಫಲಕವನ್ನು ಧ್ವಂಸ ಮಾಡಿದ ಮಹಿಳೆಯರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಆದರೆ ಘಟನೆಯಲ್ಲಿ ಭಾಗಿಯಾಗಿರುವ ಯಾವುದೇ ಅಪ್ರಾಪ್ತ ವಯಸ್ಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದರು.