ಹೊಸದಿಗಂತ ವರದಿ, ಹುಬ್ಬಳ್ಳಿ:
ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಪರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ನನ್ನ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯಆಕ್ಷೇಪಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿ ಶ್ರೀಕಾಂತ ಪೂಜಾರಿ ಅವರ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ ಎಂದರು.
ದೇಶದಲ್ಲಿ ಕಾನೂನು ಎಲ್ಲ ಧರ್ಮ, ಜಾತಿಯವರಿಗೂ ಒಂದೇ. ಅದನ್ನು ಎಲ್ಲರೂ ಗೌರವಿಸಬೇಕು. ರಾಜ್ಯದ ಗೃಹ ಇಲಾಖೆ ಆದೇಶದ ಮೇರೆಗೆ ಎಲ್‌ಪಿಸಿ ಪ್ರಕರಣದ ಆರೋಪಿಗಳನ್ನು ಬಂಧನ ಮಾಡಲಾಗುತ್ತಿದೆ. ಬಿಜೆಪಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.