Monday, October 2, 2023

Latest Posts

HEALTH| ಹಲವು ರೋಗಗಳಿಗೆ ರಾಮಬಾಣ ಈ ಅಶ್ವಗಂಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಯುರ್ವೇದ ಎಂಬುದು 12,000 ವರ್ಷಗಳಿಗೂ ಹೆಚ್ಚು ಹಳೆಯದಾದ ಔಷಧ ಪದ್ಧತಿ. ವೇದಗಳಲ್ಲಿ ಮೂಡಿಬರುವ ಈ ಪದ್ಧತಿಯಲ್ಲಿ ಆರೋಗ್ಯ ಹಾಗೂ ದೀರ್ಘ ಆಯಸ್ಸನ್ನು ಹೇಗೆ ಪಡೆಯುವುದು ಎಂಬುದನ್ನು ಹೇಳುವುದೇ ಸಂಹಿತೆಗಳು ಮೂಲ ಉದ್ದೇಶ. ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಪದ್ಧತಿ ಪ್ರಾಚೀನ ಭಾರತದಿಂದ ಬೆಳೆದು ಬಂದದ್ದು.

ಆಯುರ್ವೇದದಲ್ಲಿ ಶಸ್ತ್ರಚಿಕಿತ್ಸೆಯ ಕ್ರಮಗಳನ್ನು ಇಂದು ಕೂಡ ಆಧುನಿಕ ವೈದ್ಯ ಪದ್ಧತಿಯ ಅನುಸರಿಸುತ್ತಿದೆ .ಚರಕ ಸಂಹಿತೆ, ಸುಶ್ರುತ ಸಂಹಿತೆ ಇವೇ ಮೊದಲಾದ ಸಂಹಿತೆಗಳು ಶಸ್ತ್ರಚಿಕಿತ್ಸೆಯ ಬಗ್ಗೆ ಮಾಹಿತಿ ಒದಗಿಸುತ್ತವೆ. ಆಯುರ್ವೇದ ಭಾರತದ ಪ್ರತಿ ಜನರಲ್ಲೂ ಪ್ರತಿಬಿಂಬಿಸುತ್ತದೆ ಹಾಗೂ ಎಲ್ಲಾ ಪ್ರಜೆಗಳು ಆಯುರ್ವೇದ ಚಿಕಿತ್ಸೆ ಪಡೆದು ಇವತ್ತಿಗೂ ಮುಂಚೂಣಿಯಲ್ಲಿ ಇಟ್ಟಿದ್ದಾರೆ. ಇಂದಿಗೂ ಎಲ್ಲಾ ಭಾರತೀಯರು ಚರಕ ಸಂಹಿತೆ,ಸುಶ್ರುತ ಸಂಹಿತೆ ಪುಸ್ತಕವನ್ನು ಓದಿ ತಮ್ಮ ಜೀವನದಲ್ಲಿ ಲಾಭವನ್ನು ಪಡೆದಿದ್ದಾರೆ. ಆಯುರ್ವೇದ ಗಿಡಮೂಲಿಕೆಗಳು  ಜನಪ್ರಿಯತೆಯನ್ನು ಗಳಿಸಿವೆ . ಒಟ್ಟಾರೆ ಕ್ಷೇಮವನ್ನು ಉತ್ತೇಜಿಸಲು ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ನಿರ್ವಹಿಸಲು ಗಡಿಮೂಲಿಕೆಗಳು ಬಳಕೆಯಲ್ಲಿವೆ.

ಆಯುರ್ವೇದ ಚಿಕಿತ್ಸೆಯಲ್ಲಿ ಅಶ್ವಗಂಧಕ್ಕೆ ಬಹಳ ಪ್ರಾಮುಖ್ಯತೆಯಿದೆ.

ಅಶ್ವಗಂಧ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ. ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ.

ಆಯುರ್ವೇದ ಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ.

ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ ಚೆರ್ರಿ ಎನ್ನುತ್ತಾರೆ. ಗುಜರಾತ್, ರಾಜಾಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ, ವಾಯವ್ಯ ಭಾರತ, ಕರ್ನಾಟಕ ಮುಂತಾದೆಡೆಯಲ್ಲಿ ಈ ಗಿಡವನ್ನು ಕಾಣಬಹುದು. ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸುಮಾರು 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್‌ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!