ಅಶ್ವಿನ್‌ ಆಲ್‌ರೌಂಡರ್‌ ಆಟ: ಬಾಂಗ್ಲಾ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಶ್ವಿನ್‌ ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗಿ ಭಾರತ ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ ಭಾರತದ ಸ್ಪಿನ್‌ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿದರು. 158 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದ್ದ ಬಾಂಗ್ಲಾದೇಶ ಆಟಗಾರರು 200 ರನ್‌ ದಾಟುತ್ತಿದ್ದಂತೆ ಪೆವಿಲಿಯನ್‌ ಪರೇಡ್‌ ನಡೆಸಿದರು. ಪರಿಣಾಮ 234 ರನ್‌ಗಳಿಗೆ ಬಾಂಗ್ಲಾ ಸರ್ವಪತನ ಕಂಡಿತು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!