ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಾಸರಗೋಡು:
ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಸಮಿತಿ ಸದಸ್ಯೆಯಾಗಿ ಮಂಜೇಶ್ವರ ತಾಲೂಕಿನ ವರ್ಕಾಡಿ ಸಮೀಪದ ಪಜ್ವ ನಿವಾಸಿ, ಯುವ ನೇತಾರೆ ಎಂ.ಎಲ್.ಅಶ್ವಿನಿ ಆಯ್ಕೆಯಾಗಿದ್ದಾರೆ.
ಇವರು ಮಂಜೇಶ್ವರ ಬ್ಲಾಕ್ ಪಂಚಾಯತ್ ನ ಕಡಂಬಾರು ಡಿವಿಜನ್ ನ ಜನಪ್ರತಿನಿಧಿಯೂ ಆಗಿದ್ದಾರೆ. ರಾಷ್ಟ್ರೀಯ ಸಮಿತಿಗೆ ಆಯ್ಕೆಯಾದ ಇವರನ್ನು ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯು ಅಭಿನಂದಿಸಿದೆ.