ಮಕ್ಕಳಿಗಾಗಿ ಭರ್ಜರಿ ಆಫರ್: ‘ಗಂಧದ ಗುಡಿ’ ಟಿಕೆಟ್​ ಬೆಲೆ ಕಡಿಮೆ ಮಾಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಟ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ‘ಗಂಧದ ಗುಡಿ’ ಸಾಕ್ಷ್ಯಚಿತ್ರಕ್ಕೆ ಉತ್ತಮ ಮೆಚ್ಚುಗೆ ಸಿಕ್ಕಿದೆ. ಅಕ್ಟೋಬರ್​ 28ರಂದು ರಿಲೀಸ್​ ಆದ ಬಳಿಕ ಎಲ್ಲ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿದೆ.

ಅದರಲ್ಲೂ ಈ ಸಾಕ್ಷ್ಯಚಿತ್ರವನ್ನು ಮಕ್ಕಳು ನೋಡಬೇಕು ಎಂಬುದು ಪುನೀತ್​ ರಾಜ್​ಕುಮಾರ್ ಅವರ ಬಯಕೆ ಆಗಿತ್ತು. ಅನೇಕರಿಂದ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಮಕ್ಕಳಿಗೆ ಅನುಕೂಲ ಆಗುವ ರೀತಿಯಲ್ಲಿ ಟಿಕೆಟ್​ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಈ ಕುರಿತು ‘ಪಿಆರ್​ಕೆ ಪ್ರೊಡಕ್ಷನ್ಸ್​’ ವತಿಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ.

‘ಗಂಧದಗುಡಿ ಅಪ್ಪು ಅವರ ಒಂದು ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ನೋಡಬೇಕೆಂಬುದು. ಈ ಸಲುವಾಗಿ ನಮ್ಮ ಚಿತ್ರತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ಗಂಧದ ಗುಡಿಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ ಸಿಂಗಲ್​ ಸ್ಕ್ರೀನ್​ ಥಿಯೇಟರ್​ಗಳಲ್ಲಿ 56 ರೂಪಾಯಿಗಳಿಗೆ ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂಪಾಯಿಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿಯನ್ನು ತೋರಿಸೋಣ’ ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಪೋಸ್ಟ್​ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!