VIRAL VIDEO| ಪುಷ್ಕರ್ ಸಿಂಗ್ ಧಾಮಿ ಜೊತೆ ಅಶ್ವಿನಿ ವೈಷ್ಣವ್ ಕುಲ್ಫಿ ಪಾರ್ಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್ ಅವರು ನಿನ್ನೆ (ಬುಧವಾರ) ಡೆಹ್ರಾಡೂನ್‌ನಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಕುಲ್ಫಿ ಫಲೂಡಾ ತಿನ್ನುತ್ತಿರುವ ದೃಶ್ಯ ಕಂಡುಬಂದಿದೆ. ದೆಹಲಿ-ಡೆಹ್ರಾಡೂನ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ಕಾರ್ಯಕ್ರಮದ ನಿಮಿತ್ತ ರೈಲ್ವೆ ಸಚಿವರು ತೆರಳಿದ್ದರು. ಅಶ್ವಿನಿ ವೈಷ್ಣವ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಅವರು ರೆಸ್ಟೋರೆಂಟ್‌ನಲ್ಲಿ ಕುಲ್ಫಿ ಫಲೂಡಾದ ಪ್ಲೇಟ್‌ಗಳನ್ನು ಖರೀದಿಸಿ ಉತ್ತರಾಖಂಡ್ ಮುಖ್ಯಮಂತ್ರಿಯೊಂದಿಗೆ ತಿನ್ನುತ್ತಿದ್ದಾರೆ.

80 ಸಾವಿರಕ್ಕೂ ಹೆಚ್ಚು ವೀಕ್ಷಕರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಈ ವಿಡಿಯೋಗೆ ನೆಟಿಜನ್‌ಗಳು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ನೀವು ಈ ಕ್ಷಣವನ್ನು ಆನಂದಿಸಿದ್ದೀರ ಎಂದು ಭಾವಿಸುತ್ತೇವೆ ಸರ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

https://twitter.com/i/status/1661410825352151040

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!