Monday, December 29, 2025

ಕರ್ತವ್ಯ ಮುಗಿಸಿ ಮನೆಗೆ ಮರಳಿದ ಎಎಸ್‌ಐ ಅಧಿಕಾರಿ ಹೃದಯಾಘಾತದಿಂದ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಮೃತ ದುರ್ದೈವಿ.

ಮಾಹಿತಿ ಪ್ರಕಾರ, ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿಕೊಂಡು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಯೊಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಅಸಹಜವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗಮಧ್ಯೆಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಪೊಲೀಸ್ ವಸತಿ ಗೃಹದಲ್ಲೇ ನಾಗನಾಯಕ ಅವರು ಕುಟುಂಬದೊಂದಿಗೆ ವಾಸವಾಗಿದ್ದರು. ಕರ್ತವ್ಯನಿಷ್ಠ ಹಾಗೂ ಶಿಸ್ತಿನ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ನಾಗನಾಯಕ ಅವರ ಅಗಲಿಕೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

error: Content is protected !!