ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಆರಂಭಿಸಿರುವ ಸಮೀಕ್ಷೆ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಸಹಾಯಕ ನಿರ್ದೇಶಕ ಅಲೋಕ್ ಕುಮಾರ್ ತ್ರಿಪಾಠಿ, ಸಂಜಯ್ ಮಹಂತಿ ನೇತೃತ್ವದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವಿಶೇಷ ತಂಡವು ಸಮೀಕ್ಷೆ ಮುಂದುವರಿಸಿದ್ದು, ಸಮೀಕ್ಷೆಗೆ ಪೊಲೀಸ್ ಭದ್ರತೆ ನೀಡಲಾಗಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಈ ಮೊದಲು ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂಬ ಅರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸತ್ಯಾಂಶ ಬೆಳಕಿಗೆ ತರಲು ಹಿಂದೂ ಪರ ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಇದೀಗ ನ್ಯಾಯಾಲಯದ ಆದೇಶದಂತೆ ಭಾರತೀಯ ಪುರಾತತ್ವ ಇಲಾಖೆಯು ಶುಕ್ರವಾರ ಈ ವೈಜ್ಞಾನಿಕ ಸಮೀಕ್ಷೆ ಕೈಗೆತ್ತಿಕೊಂಡಿದೆ.