ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾ ಕಪ್ 2022 ರ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಆಗಸ್ಟ್ 28 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.
ಆಗಸ್ಟ್ 28 ರಂದು ದುಬೈನಲ್ಲಿ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಂದ್ಯಾವಳಿಯು ಆಗಸ್ಟ್ 27 ರಂದು ಪ್ರಾರಂಭವಾಗಲಿದೆ ಮತ್ತು ಫೈನಲ್ ಸೆಪ್ಟೆಂಬರ್ 11ರಂದು ನಡೆಯಲಿದೆ.
ಈ ಕುರಿತಂತೆ ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಟ್ವಿಟ್ ನಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ 27 ರಿಂದ ಏಷ್ಯಾ ಕಪ್ 2022 ಆರಂಭಗೊಂಡು ಸೆಪ್ಟೆಂಬರ್ 11ರಂದು ಫೈನಲ್ ಪಂದ್ಯ ನಡೆಯಲಿದೆ. 15ನೇ ಆವೃತ್ತಿಯ ಏಷ್ಯಾಕಪ್ ಐಸಿಸಿ ಟಿ20 ವಿಶ್ವಕಪ್ಗೆ ಮುಂಚಿತವಾಗಿ ಸೂಕ್ತ ಸಿದ್ಧತೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ.