ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಟೂರ್ನಿಯ ಲೀಗ್ ಹಂತದಲ್ಲಿ ಮತ್ತೊಂದು ರೋಚಕ ಪಂದ್ಯಕ್ಕೆ ಪಾಕಿಸ್ತಾನದ ಲಾಹೋರ್ನ ಗಡಾಫಿ ಸ್ಟೇಡಿಯಂ ಇಂದು ಸಾಕ್ಷಿಯಾಗಲಿದೆ.
ಇಂದು ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ತನ್ನ ಮೊದಲ ಪಂದ್ಯದಲ್ಲಿ ಸೋಲನ್ನು ಕಂಡಿರುವ ಬಾಂಗ್ಲಾದೇಶಕ್ಕೆ ಮಾಡು ಇಲ್ಲವೇ ಮಡಿ ಎನ್ನವಂತಾಗಿದೆ. ಮತ್ತೊಂದೆಡೆ ಅಫ್ಘಾನ್ ತಂಡಕ್ಕೆ ಇದು ಮೊದಲ ಪಂದ್ಯವಾಗಿದೆ.
ಗ್ರೂಪ್ ಬಿ ನಲ್ಲಿರುವ ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ಮತ್ತು ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿವೆ.
ಒಟ್ಟಾರೆ ಇಂದಿನ ಪಂದ್ಯ ಪ್ರೇಕ್ಷಕರಿಗೆ ಒಳ್ಳೆಯ ಮನರಂಜನೆ ನೀಡಲಿದೆ. ಮಧ್ಯಾಹ್ನ 3 ಗಂಟೆಗೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಪಂದ್ಯ ಪ್ರಸಾರವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಪಂದ್ಯವನ್ನು ವೀಕ್ಷಿಸಬಹುದು.