Sunday, October 1, 2023

Latest Posts

ASIA CUP 2023 | ಏಷ್ಯಾಕಪ್ ಫೈನಲ್ ಪಂದ್ಯ ಕೊಲಂಬೊದಿಂದ ಸ್ಥಳಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಲಂಬೊದಲ್ಲಿ ಈಗಾಗಲೇ ಮಳೆ ಅಬ್ಬರಿಸುತ್ತಿದ್ದು, ನಿನ್ನೆ ಭಾರತ ಹಾಗೂ ಪಾಕ್ ಪಂದ್ಯ ಮಳೆಯಿಂದ ರದ್ದಾಗಿದ್ದು, ಇಂದು ಮತ್ತೆ ಪಂದ್ಯ ಆರಂಭವಾಗಲಿದೆ.

ಸೆ.17 ರಂದು ಏಷ್ಯಾಕಪ್ ಫೈನಲ್ ಪಂದ್ಯ ನಡೆಯಲಿದ್ದು, ಕೊಲಂಬೊದಲ್ಲಿ ಆ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಫೈನಲ್ ಪಂದ್ಯವನ್ನು ಕ್ಯಾಂಡಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ಕ್ಯಾಂಡಿಯ ಪಲ್ಲೆಕೆಲೆಯಲ್ಲಿರುವ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇಂದು ಭಾರತ-ಪಾಕ್ ಸೂಪರ್ 4 ಹಂತದ ಮ್ಯಾಚ್ ನಡೆಯಲಿದೆ. ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮ್ಯಾಚ್ ಪೂರ್ಣವಾಗುವ ಸಾಧ್ಯತೆ ಕಡಿಮೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!