Tuesday, September 30, 2025

ಏಷ್ಯಾಕಪ್ ಹೈವೋಲ್ಟೇಜ್ ಫೈನಲ್: ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಮುಖಾಮುಖಿಯಾಗುತ್ತಿದ್ದು, ಸದ್ಯ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ. ಇಂಜುರಿಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್​ಪ್ರಿತ್ ಬುಮ್ರಾ ಕಮ್​ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ.

ಭಾರತ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ.

ಪಾಕಿಸ್ತಾನ ಪ್ಲೇಯಿಂಗ್ XI: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ (ನಾಯಕ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್( ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.