ಹೊಸದಿಗಂತ ಡಿಜಿಟಲ್ ಡೆಸ್ಕ್:
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾಕಪ್ 2025 ಫೈನಲ್‌ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ದಾಖಲೆಯ 9ನೇ ಬಾರಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. ಕೆಲ ತಿಂಗಳುಗಳ ಹಿಂದೆ ಗಡಿ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ ಭಾರತಕ್ಕೆ ಸೋಲುಣಿಸಿದ್ದ ಪಾಕಿಸ್ತಾನ, ಕ್ರಿಕೆಟ್‌ನಲ್ಲೂ ಭಾರತದ ಎದುರು ಮಣಿದಿದೆ. ಈ ಗೆಲುವಿನಿಂದ ಭಾರತ ಏಷ್ಯಾಕಪ್‌ನಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದೆ.
ಭಾರತ-ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆಯೇ ನಡೆದ ಈ ಟೂರ್ನಮೆಂಟ್ ಸಾಕಷ್ಟು ವಿವಾದಗಳಿಗೆ ಕಾರಣವಾಯಿತು. ಆದಾಗ್ಯೂ, ಟೀಂ ಇಂಡಿಯಾ ಒಮ್ಮೆ ಅಲ್ಲ, ಎರಡು ಬಾರಿ ಅಲ್ಲ, ಸತತ ಮೂರೂ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಸೋಲಿಸಿ ತನ್ನ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಟೀಂ ಇಂಡಿಯಾ ಗೆಲುವಿನ ಬಳಿಕ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ, ‘ಮೈದಾನದಲ್ಲಿ ಆಪರೇಷನ್ ಸಿಂಧೂರ್. ಫಲಿತಾಂಶ ಒಂದೇ: ಭಾರತಕ್ಕೆ ಜಯ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.
ಭಾರತ ಕ್ರಿಕೆಟ್‌ನಲ್ಲಿ ಸಾಧಿಸಿದ ಈ ಗೆಲುವು ಕೇವಲ ಏಷ್ಯಾಕಪ್ ಟ್ರೋಫಿಯಷ್ಟೇ ಅಲ್ಲ, ದೇಶದ ಕ್ರೀಡಾ ಸಾಮರ್ಥ್ಯದ ಮತ್ತೊಂದು ಉಜ್ವಲ ಸಾಧನೆ. ಪಾಕಿಸ್ತಾನ ವಿರುದ್ಧ ದಾಖಲೆಯ ಹ್ಯಾಟ್ರಿಕ್ ಜಯ ಸಾಧಿಸಿದ ಭಾರತ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ.