Friday, September 29, 2023

Latest Posts

ಏಷ್ಯಾಕಪ್ ಟೂರ್ನಿ: ಟೀಮ್ ಇಂಡಿಯಾ ಬ್ಯಾಟಿಂಗ್ ಗೆ ಬ್ರೇಕ್ ನೀಡಿದ ವರುಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ.
ಆದ್ರೆ ಈ ವೇಳೆ ಮಳೆರಾಯ ಎಂಟ್ರಿಕೊಟ್ಟಿದ್ದು, ಪಂದ್ಯ ಅರ್ಧಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಭಾರತ ತಂಡವು 24.1 ಓವರ್ ಅಂತ್ಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 142 ರನ್ ಬಾರಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಟೀಂ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್‌ ಶತಕದ ಜತೆಯಾಟವಾಡುವ ಮೂಲಕ ಭದ್ರಬುನಾದಿ ಹಾಕಿ ಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 16.4 ಓವರ್‌ಗಳಲ್ಲಿ 121 ರನ್‌ಗಳ ಜತೆಯಾಟವಾಡಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!