ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿ ಮಂಗಳವಾರ ಆರಂಭಗೊಳ್ಳಲಿದೆ. ಭಾರತ, ಪಾಕಿಸ್ತಾನ ಸೇರಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿದ್ದು, ಯುಎಇ ದೇಶದ 2 ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಟೂರ್ನಿಯಲ್ಲಿ 20 ದಿನಗಳ ಕಾಲ ಒಟ್ಟು 19 ಪಂದ್ಯಗಳು ನಡೆಯಲಿವೆ.
ಸೆ.28ರಂದು ಫೈನಲ್ ಪಂದ್ಯ ನಿಗದಿಯಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಮಂಗಳವಾರ ಅಫ್ಘಾನಿಸ್ತಾನಕ್ಕೆ ಹಾಂಕಾಂಗ್ ಸವಾಲು ಎದುರಾಗಲಿದೆ. ಹಾಲಿ ಚಾಂಪಿಯನ್ ಭಾರತ ತಂಡ ಬುಧವಾರ ಯುಎಇ ವಿರುದ್ದ ತನ್ನ ಮೊದಲ ಪಂದ್ಯವಾಡಲಿದೆ.
ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ಯುಎಇ ಹಾಗೂ ಒಮಾನ್ ‘ಎ’ ಗುಂಪಿನಲ್ಲಿವೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಹಾಂಕಾಂಗ್ ‘ಬಿ’ ಗುಂಪಿನಲ್ಲಿವೆ. ಪ್ರತಿ ತಂಡಗಳು ಗುಂಪು ಹಂತದಲ್ಲಿ ಒಮ್ಮೆ ಪರಸ್ಪರ ಸೆಣಸಾಡಲಿವೆ. ಗುಂಪಿನ ಅಗ್ರ-2 ತಂಡಗಳು ಸೂಪರ್ -4 ಹಂತ ಪ್ರವೇಶಿಸಲಿವೆ. ಸೂಪರ್ -4ನಲ್ಲಿ ಅಗ್ರ-2 ಸ್ಥಾನ ಪಡೆದ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.