ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತ ಚಾಂಪಿಯನ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರತಿಷ್ಠಿತ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿಯಲ್ಲಿ ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಶನಿವಾರ ಚೆನ್ನೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಮಲೇಷ್ಯಾವನ್ನು ಮಣಿಸಿ ಚಾಂಪಿಯನ್‌ ಆಯಿತು. ಫೈನಲ್‌ ಪಂದ್ಯದಲ್ಲಿ ಭಾರತ ತಂಡ 4-3 ಗೋಲುಗಳಿಂದ ಮಲೇಷ್ಯಾ ತಂಡವನ್ನು ಸೋಲಿಸಿದೆ.

ಚೆನ್ನೈನ ಮೇಯರ್ ರಾಧಾಕೃಷ್ಣನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಮಲೇಷ್ಯಾವನ್ನು 4-3 ಅಂತರದಿಂದ ಸೋಲಿಸಿತು. ಒಂದು ಹಂತದಲ್ಲಿ ಭಾರತ ತಂಡ ಪಂದ್ಯದಲ್ಲಿ 1-3 ಹಿನ್ನಡೆ ಕಂಡಿತ್ತು. ಆದರೆ, ಅಮೋಘವಾಗಿ ತಿರುಗೇಟು ನೀಡುವ ಮೂಲಕ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಭಾರತದ ಪರವಾಗಿ ಜುಗ್ರಾಜ್‌ ಸಿಂಗ್‌ 9ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಸಿಡಿಸಿದರೆ, 45ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್‌ ಸಿಂಗ್‌ ಪೆನಾಲ್ಟಿ ಸ್ಟ್ರೋಕ್‌ ಮೂಲಕ ಗೋಲು ಬಾರಿಸಿದರು. ಗುರ್ಜಂತ್‌ ಸಿಂಗ್‌ (45) ಹಾಗೂ ಆಕಾಶ್‌ದೀಪ್‌ ಸಿಂಗ್ (56) ಭಾರತದ ಪರವಾಗಿ ಗೋಲು ಬಾರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!