ಹೊಸದಿಗಂತ ಡಿಜಿಟಲ್ ಡೆಸ್ಕ್:
16ನೇ ಏಷ್ಯನ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಎಲವೆನಿಲ್ ವಲರಿವನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.
ತಮಿಳುನಾಡಿನ ಈ 26ರ ವಯಸ್ಸಿನ ಆಟಗಾರ್ತಿ 253.6 ಅಂಕಗಳನ್ನು ಗಳಿಸುವ ಮೂಲಕ ಫೈನಲ್‌ನಲ್ಲಿ ಅಗ್ರಸ್ಥಾನ ಪಡೆದರು. ಅವರು ವಿಶ್ವಕಪ್ ಟೂರ್ನಿಯಲ್ಲಿ ಹಲವು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ ಮತ್ತು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿಯೂ ಅಗ್ರಸ್ಥಾನ ಪಡೆದಿದ್ದಾರೆ. ಚೀನಾದ ಶಿನ್ಲು ಪೆಂಗ್ 253 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರೆ, ಕೊರಿಯಾದ ಯುಂಜಿ ಕ್ವಾನ್ (231.2) ಕಂಚಿನ ಪದಕ ಗೆದ್ದರು.
ಈ ಸ್ಪರ್ಧೆಯಲ್ಲಿ ವಲರಿವನ್ ಅವರ ಮೊದಲ ವೈಯಕ್ತಿಕ ಪದಕ ಇದಾಗಿದೆ. ಇದಕ್ಕೂ ಮೊದಲು ಅವರು ತಂಡದ ಸ್ಪರ್ಧೆಗಳಲ್ಲಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದರು.