ಏಷ್ಯನ್ ಗೇಮ್ಸ್ 2023: ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಒಲಿದ ಚಿನ್ನದ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದ ಎರಡನೇ ದಿನವಾದ ಸೋಮವಾರದಂದು ಭಾರತಕ್ಕೆ ಮೊದಲ ಚಿನ್ನದ ಪದಕ ಲಭಿಸಿದೆ.

ಏಷ್ಯನ್ ಗೇಮ್ಸ್ ನಲ್ಲಿ ಪುರುಷರ 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತ ಚಿನ್ನದ ಪದಕವನ್ನು ಪಡೆದುಕೊಂಡಿದೆ.

ವಿಶ್ವ ಚಾಂಪಿಯನ್ ರುದ್ರಾಂಕ್ಷ್ ಬಿ. ಪಾಟೀಲ, ದಿವ್ಯಾಂಶ್ ಸಿಂಗ್ ಪನ್ವಾರ್, ಐಶ್ವರಿ ಪ್ರತಾಪ್ ಸಿಂಗ್ ತೋಮರ್ ತಂಡವು ಅರ್ಹತಾ ಸುತ್ತಿನಲ್ಲಿ 1893.7 ಅಂಕ ಗಳಿಸಿ ವಿಶ್ವ ದಾಖಲೆ ನಿರ್ಮಿಸಿತು. ದಕ್ಷಿಣ ಕೊರಿಯಾ 1890.1 ಅಂಕಗಳೊಂದಿಗೆ ಬೆಳ್ಳಿ ಗೆದ್ದರೆ, ಚೀನಾ 1888.2 ಅಂಕಗಳೊಂದಿಗೆ ಕಂಚು ಗೆದ್ದಿದೆ.

ಭಾರತದ ಪರ ರುದ್ರಂಕ್ಷ್ 632.5, ತೋಮರ್ 631.6 ಮತ್ತು ಪನ್ವಾರ್ 629.6 ಅಂಕಗಳನ್ನು ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!