ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶ ಪಡೆದಿದೆ .
ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ, ಎಂಟು ವಿಕೆಟ್‌ಗಳಿಂದ ಮಣಿಸುವ ಮೂಲಕ ಸ್ಮೃತಿ ಮಂದಾನ ಪಡೆ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾ ತಂಡವು 17.5 ಓವರ್‌ಗಳಲ್ಲಿ ಕೇವಲ 51 ರನ್ ಗಳಿಸಿತು. ಸ್ಮೃತಿ ಮಂದಾನ ಪಡೆ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪುವ ಮೂಲಕ ಗೆಲುವನ್ನು ಸಾಧಿಸಿತು.