ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಹ್ಯಾಂಗ್‌ಝೌನಲ್ಲಿ ಏಷ್ಯನ್ ಗೇಮ್ಸ್ ನಡೆಯುತ್ತಿದ್ದು, ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕ್ರಿಕೆಟ್ ಫೈನಲ್ಸ್‌ನಲ್ಲಿ ಭಾರತದ ಮಹಿಳಾ ತಂಡ ಶ್ರೀಲಂಕಾ ತಂಡವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯವನ್ನು ಗೆದ್ದಲ್ಲಿ ತಂಡವು ಚಿನ್ನದ ಪದಕಕ್ಕೆ ಕೊರಳೊಡ್ಡಲಿದೆ. ಸೋತ ತಂಡಕ್ಕೆ ಬೆಳ್ಳಿ ಪದಕ ಸಿಗಲಿದೆ. ಭಾರತ ತಂಡವನ್ನು ಹರ್ಮನ್ ಪ್ರೀತ್ ಕೌರ್ ಮುನ್ನಡೆಸುತ್ತಿದ್ದಾರೆ.