Friday, December 8, 2023

Latest Posts

ಏಷ್ಯನ್ ಗೇಮ್ಸ್ ಕ್ರಿಕೆಟ್: ಪಂದ್ಯಕ್ಕೆ ವರುಣನ ಎಂಟ್ರಿ, ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯನ್ ಗೇಮ್ಸ್ ಕ್ರಿಕೆಟ್ 2023 (Asian Games 2023) ಟೂರ್ನಿಯಲ್ಲಿ ಇಂದು (ಗುರುವಾರ) ನಡೆದ ಭಾರತ (India) ಮತ್ತು ಮಲೇಷ್ಯಾ (Malaysia) ಮಹಿಳಾ ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಈ ಮೂಲಕ ಮಹಿಳಾ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ರದ್ದಾಗಿದೆ. ಆದರೂ ಭಾರತ ತಂಡ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ.

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದುಸ್ಮೃತಿ ಮಂದಾನ (27) ಹಾಗೂ ಶೆಫಾಲಿ ವರ್ಮಾ ಜೋಡಿ ಮೊದಲ ವಿಕೆಟ್‍ಗೆ 57 ರನ್ ಕಲೆಹಾಕಿ ಉತ್ತಮ ಆರಂಭ ನೀಡಿತು. ಭಾರತ 5.4 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 60 ರನ್ ಗಳಿಸಿದ್ದಾಗ ಮಳೆ ಸುರಿಯಿತು. ಇದರಿಂದಾಗಿ ಪಂದ್ಯವನ್ನು 15 ಓವರ್‌ಗಳಿಗೆ ಕಡಿತಗೊಳಿಸಲಾಯಿತು.

ಬಳಿಕ ಪಂದ್ಯ ಆರಂಭಗೊಂಡಿದ್ದು, ಅಬ್ಬರದ ಬ್ಯಾಟಿಂಗ್ ನಡೆಸಿದ ಶೆಫಾಲಿ 39 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‍ಗಳಿದ್ದ 67 ರನ್ ಸಿಡಿಸಿ ಔಟಾದರು. ಅವರಿಗೆ ಉತ್ತಮ ಸಾಥ್ ನೀಡಿದ ಜೆಮಿಯಾ ರಾಡ್ರಿಗಸ್ 29 ಎಸೆತಗಳಲ್ಲಿ 47 ರನ್ ಬಾರಿಸಿ ಅಜೇಯವಾಗಿ ಉಳಿದರು ಭಾರತ ನಿಗದಿತ ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಮಲೇಷ್ಯಾ ಇನಿಂಗ್ಸ್ ಆರಂಭಿಸುತ್ತಿದ್ದಂತೆಯೇ ಮಳೆ ಸುರಿಯಲಾರಂಭಿಸಿತು. ಮಲೇಷ್ಯಾ ತಂಡ ಕೇವಲ ಎರಡು ಎಸೆತಗಳನ್ನು ಎದುರಿಸಿದ್ದಾಗ ಮಳೆ ಆರಂಭವಾಯಿತು. ಭಾರೀ ಮಳೆಯ ಕಾರಣ ಪಂದ್ಯವು ಫಲಿತಾಂಶವಿಲ್ಲದೆ ರದ್ದಾಯಿತು. ಸೆಮಿಫೈನಲ್ ಹಣಾಹಣಿಯು ಸೆ.24 ರಂದು ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!