Sunday, December 10, 2023

Latest Posts

ಏಷ್ಯನ್ ಗೇಮ್ಸ್‌: ಶ್ರೀಲಂಕಾ ವಿರುದ್ಧ ಚಿನ್ನ ಗೆದ್ದು ಬೀಗಿದ ಇಂಡಿಯಾ ಮಹಿಳಾ ಟೀಮ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಷ್ಯನ್ ಗೇಮ್ಸ್‌ ಮಹಿಳಾ ಕ್ರಿಕೆಟ್ ಫೈನಲ್‌ನಲ್ಲಿ ಸ್ಮೃತಿ ಮಂಧನಾ, ಜೆಮಿಯಾ ರೋಡ್ರಿಗ್ಸ್‌ ಸಮಯೋಚಿತ ಬ್ಯಾಟಿಂಗ್ ಹಾಗೂ ತಿತಾಸ್ ಸಧು ಮಿಂಚಿನ ದಾಳಿಯ ನೆರವಿನಿಂದ ಶ್ರೀಲಂಕಾ ಎದುರು 19 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಕೌರ್ ಪಡೆ ಚಿನ್ನದ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿದೆ.

ಭಾರತ ನೀಡಿದ್ದ 117 ರನ್ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 97 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವು ಆರಂಭದಲ್ಲೇ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ 15 ಎಸೆತಗಳನ್ನು ಎದುರಿಸಿ 1 ಬೌಂಡರಿ ಪೆವಿಲಿಯನ್ ಸೇರಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಸ್ಮೃತಿ ಮಂಧನಾ ಹಾಗೂ ಜೆಮಿಯಾ ರೋಡ್ರಿಗ್ಸ್‌ ಜವಾಬ್ದಾರಿಯುತ 73 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಎಡಗೈ ಬ್ಯಾಟರ್ ಸ್ಮೃತಿ ಮಂಧನಾ 45 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 46 ರನ್ ಗಳಿಸಿ ರಣವೀರ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಜೆಮಿಯಾ ರೋಡ್ರಿಗ್ಸ್‌ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಜೆಮಿಯಾ ಪೆವಿಲಿಯನ್ ಸೇರುವ ಮುನ್ನ 40 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಮಧ್ಯಮ ವೇಗಿ ತಿತಾಸ್ ಸಧು ತಾವು ಎಸೆದ ಮೊದಲ ಓವರ್‌ನಲ್ಲೇ ಎರಡು ವಿಕೆಟ್ ಕಬಳಿಸಿ ಡಬಲ್ ಶಾಕ್ ನೀಡಿದರು. ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಹಸಿನಿ ಪೆರೆರಾ(25), ನೀಲಾಕ್ಷಿ ಡಿ ಸಿಲ್ವಾ(23) ಹಾಗೂ ಒಶಾಡಿ ರಣಸಿಂಘೆ(19) ಭಾರತೀಯ ಬೌಲರ್‌ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ, ಭಾರತದ ಸಂಘಟಿತ ಪ್ರದರ್ಶಕ್ಕೆ ಲಂಕಾ ಕೊನೆಗೂ ತಲೆಬಾಗಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!