ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಇಂದು ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಮಣಿಸಿ ದಾಖಲೆಯ 5ನೇ ಬಾರಿಗೆ ಫೈನಲ್ಗೇರಿದೆ.
ಈ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಪ್ರಶಸ್ತಿ ಪಂದ್ಯದಲ್ಲಿ ಆತಿಥೇಯ ಚೀನಾ ತಂಡವನ್ನು ಎದುರಿಸಲಿದೆ.
ಈ ಪಂದ್ಯಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಚೀನಾ ತಂಡ, ಪಾಕಿಸ್ತಾನವನ್ನು ಪೆನಾಲ್ಟಿ ಶೂಟೌಟ್ನಲ್ಲಿ 2-0 ಅಂತರದಲ್ಲಿ ಮಣಿಸಿ ಇದೇ ಮೊದಲ ಬಾರಿಗೆ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ.