ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಕಿ ತಂಡ ಸತತ ಎರಡನೇ ಗೆಲುವು ದಾಖಲಿಸಿದೆ. ಪಂದ್ಯಾವಳಿಯ ಮೊದಲ ದಿನದಂದು ಆತಿಥೇಯ ಚೀನಾ ತಂಡವನ್ನು 3-0 ಗೋಲುಗಳಿಂದ ಮಣಿಸಿದ ಹರ್ಮನ್ಪ್ರೀತ್ ಪಡೆ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು 5-1 ಗೋಲುಗಳಿಂದ ಏಕಪಕ್ಷೀಯವಾಗಿ ಮಣಿಸಿದೆ.
ಇದರೊಂದಿಗೆ ಭಾರತ ತಂಡ ಆಡಿರುವ ಎರಡೂ ಪಂದ್ಯಗಳಲ್ಲು ಭರ್ಜರಿ ಜಯ ದಾಖಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಜಪಾನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಹಾಕಿ ತಂಡ ಆರಂಭದಿಂದಲೂ ತನ್ನ ಪ್ರಾಬಲ್ಯವನ್ನು ಕಾಯ್ದುಕೊಂಡಿತು. ಪಂದ್ಯ ಆರಂಭವಾದ ಎರಡೇ ನಿಮಿಷದಲ್ಲಿ ಟೀಂ ಇಂಡಿಯಾ ಎರಡು ಗೋಲು ಗಳಿಸಿತು. ಇದರಿಂದಾಗಿ ಭಾರತ ತಂಡ ಜಪಾನ್ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿತು.