ಏಷ್ಯನ್ ಕುಸ್ತಿ ಚಾಂಪಿಯನ್​ಶಿಪ್​: ಐತಿಹಾಸಿಕ ಚಿನ್ನ ಗೆದ್ದ ರವಿ ದಹಿಯಾ; ಪೂನಿಯಾಗೆ ಬೆಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಂಗೋಲಿಯಾದ ಉಲಾನ್‌ಬಾತರ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ರಸ್ಲರ್‌ ರವಿ ದಹಿಯಾ ಐತಿಹಾಸಿಕ ದಾಖಲೆ ಬರೆದಿದ್ದಾರೆ.
ಟೋಕಿಯೊ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ರವಿ ದಹಿಯಾ 12-2 ಅಂತರದಲ್ಲಿ ಕಜಕಿಸ್ತಾನದ ಕಲ್ಜಾನ್ ರಖತ್ ಅವರನ್ನು ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.ಈ ಮೂಲಕ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕ ಗೆದ್ದ ಸಾಧನೆ ಮೆರೆದಿದ್ದಾರೆ.
ಭಾತರದ ಇನ್ನೊಬ್ಬ ಸ್ಟಾರ್‌ ರೆಸ್ಲರ್‌ ಬಜರಂಗ್ ಪೂನಿಯಾ 65 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಫೈನಲ್‌ನಲ್ಲಿ ಇರಾನ್‌ನ ರೆಹಮಾನ್ ಮೌಸಾ ಅಮೌಜಾದ್‌ಖಲಿಲಿ ವಿರುದ್ಧ 1-3 ಅಂಕಗಳ ಸಣ್ಣ ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!