ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಗೆ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎನ್​ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಆಹ್ವಾನ ಸ್ವೀಕರಿಸಿದ್ದಾರೆ .

ಪ್ರಮಾಣ ವಚನ ಸ್ವಿಕಾರ ಸಮಾರಂಭದಲ್ಲಿ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಸೇರಿದಂತೆ ಹತ್ತು ಲೋಕೋ ಪೈಲಟ್‌ಗಳನ್ನು ಆಹ್ವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಮಹಾರಾಷ್ಟ್ರದ ಪ್ರದೇಶದ ಸತಾರಾ ಮೂಲದವರಾದ ಸುರೇಖಾ ಅವರು ಲೋಕೋ ಪೈಲೇಟ್​ ಆಗಿ 1988ರಲ್ಲಿ ರೈಲ್ವೆ ಇಲಾಖೆ ಸೇರಿದ್ದರು. ಯಾದವ್ ಅವರು ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್​ ರೈಲನ್ನು ಚಲಾಯಿಸಿದ ದೇಶದ ಮೊದಲ ಮಹಿಳಾ ಲೋಕೋ ಪೈಲಟ್ ಆಗಿದ್ದಾರೆ. ಅವರು ಪ್ರಸ್ತುತ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮತ್ತು ಸೋಲಾಪುರ ನಡುವೆ ಪೈಲಟ್ ಮಾಡುತ್ತಿದ್ದಾರೆ. ತಮ್ಮ ಅಪ್ರತಿಮ ಸಾಧನೆಗಳಿಗಾಗಿ, ಅವರು ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳೊಂದಿಗೆ ಎನ್‌ಡಿಎ ಬಹುಮತ ಪಡೆದ ಕಾರಣ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲಿದ್ದಾರೆ .

ಇಂದು ಮೋದಿ ಮತ್ತು ಇತರ ಎನ್‌ಡಿಎ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ 18ನೇ ಲೋಕಸಭೆಯಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!