ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಯಾಗಿದೆ. ಈಗಷ್ಟೇ ಚಂದ್ರಾಯಾನ-3ರ ಉಪಗ್ರಹವನ್ನು ಹೊತ್ತ ಎಲ್‌ಎಂವಿ-3 ರಾಕೆಟ್ ನಭದತ್ತ ಚಿಮ್ಮಿದೆ.
ಚಂದ್ರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಮತ್ತು ರೋವರ್‌ನ್ನು ಇಳಿಸುವ ಈ ಕಾರ್ಯಾಚರಣೆ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಚಂದ್ರಯಾನ-3 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-111 ಮೂಲಕ ಉಡಾವಣೆಯಾಗಿದೆ.
ಚಂದ್ರಾಯಾನ-3 ಲ್ಯಾಂಡರ್, ರೋವರ್ ಹಾಗೂ ಪ್ರೊಪಲ್ಷನ್ ಮಾಡ್ಯೂಲ್‌ನ್ನು ಹೊಂದಿದೆ. ಇತರ ಒಟ್ಟಾರೆ ತೂಕ 3,900 ಕಿಲೋಗ್ರಾಂಗಳಾಗಿದೆ. ಇದು ಚಂದ್ರನ ಮೇಲ್ಮೈ ಮೇಲೆ ಆ.23 ಅಥವಾ 24ರ ಸುಮಾರಿಗೆ ಲ್ಯಾಂಡಿಂಗ್ ಆಗುವ ನಿರೀಕ್ಷೆ ಇದೆ. ಉಡಾವಣೆಯ ನೇರ ವೀಕ್ಷಣೆಗೆ ಇಸ್ರೋ ಅವಕಾಶ ಮಾಡಿಕೊಟ್ಟಿದ್ದು, ಇಸ್ರೋ ಅಧಿಕೃತ ವೆಬ್‌ಸೈಟ್ ಹಾಗೂ ಯುಟ್ಯೂಬ್ ಚಾನೆಲ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನಡೆಯುತ್ತಿದೆ.
#WATCH | Indian Space Research Organisation (ISRO) launches #Chandrayaan-3 Moon mission from Satish Dhawan Space Centre in Sriharikota.
Chandrayaan-3 is equipped with a lander, a rover and a propulsion module. pic.twitter.com/KwqzTLglnK
— ANI (@ANI) July 14, 2023
2019ರಲ್ಲಿ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ನೌಕೆಯನ್ನು ಇಳಿಸುವ ಚಂದ್ರಯಾನ-2 ಕಾರ್ಯಾಚರಣೆ ಭಾಗಶಃ ಮಾತ್ರ ಯಶಸ್ವಿಯಾಗಿತ್ತು. ಚಂದ್ರನ ಪರಿಭ್ರಮಣ ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿತ್ತು. ಆದರೆ ಚಂದ್ರನ ನೆಲ ಇನ್ನೇನು ಮುಟ್ಟಬೇಕು ಎನ್ನುವಾಗ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು.
ಚಂದ್ರಯಾನ-2ರ ವೈಫಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಚಂದ್ರಯಾನ-3ಯಶಸ್ಸಿಗೆ ಇಸ್ರೋ ಶ್ರಮಿಸಿದೆ. ಚಂದ್ರಯಾನ-3, ಚಂದ್ರಯಾನ-2ರ ಮುಂದುವರಿದ ಭಾಗವಾಗಿದ್ದು, ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ಗಗನನೌಕೆ ಇಳಿಸಲಾಗುವುದು.
ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ತನ್ನ ಲ್ಯಾಂಡರ್ ಮತ್ತು ರೋವರ್‌ಗಳನ್ನು ಇಳಿಸಿದೆ. ಈ ಬಾರಿ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್‌ನ್ನು ಇಳಿಸುವಲ್ಲಿ ಮತ್ತು ರೋವರ್‌ನ್ನು ಲ್ಯಾಂಡರ್ ಒಳಗಿಂದ ಹೊರಗೆ ಕಳಿಸುವಲ್ಲಿ ಭಾರತ ಯಶಸ್ವಿಯಾದರೆ ಚಂದ್ರನ ದಕ್ಷಿಣ ಧ್ರುವದಲ್ಲಿ ಕಾರ್ಯಾಚರಣೆ ನಡೆಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಇಳಿದ ನಂತರ ಲ್ಯಾಂಡರ್ ಹಾಗೂ ರೋವರ್ ನೌಕೆಗಳೆರಡೂ ಒಂದು ದಿನ ಮಾತ್ರ ಚಂದ್ರನಂಗಳದಲ್ಲಿ ಕಾರ್ಯ ನಿರ್ವಹಿಸಲಿವೆ, ಚಂದ್ರನಲ್ಲಿ ಒಂದು ದಿನ, ಭೂಮಿಯಲ್ಲಿ 14 ದಿನಗಳಿಗೆ ಸಮಯವಾಗಿದೆ. ಈ ಅವಧಿಯಲ್ಲಿ ಕಾರ್ಯಾಚರಣೆ ನಡೆಯಲಿದೆ.