Tuesday, March 28, 2023

Latest Posts

ಅಸ್ಸಾಂ ವಿಧಾನಸಭೆ ಬಜೆಟ್ ಅಧಿವೇಶನ ಇಂದಿನಿಂದ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನ ಗುವಾಹಟಿಯ ದಿಸ್ಪುರ್‌ನಲ್ಲಿ ಇಂದು ಆರಂಭವಾಗಲಿದೆ. ಏಪ್ರಿಲ್ 5ರವರೆಗೆ ಅಧಿವೇಶನ ನಡೆಯಲಿದ್ದು, ಒಟ್ಟಾರೆ 14 ಸಭೆಗಳು ನಡೆಯಲಿವೆ.

ರಾಜ್ಯಪಾಲರ ಭಾಷಣದೊಂದಿಗೆ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ನೂತನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಣಕಾಸು ಸಚಿವ ಅಜಂತಾ ನಿಯೋಗ್, ಈ ತಿಂಗಳ 16 ರಂದು ಬಜೆಟ್ ಮಂಡಿಸಲಿದ್ದಾರೆ.

ಈ ಅಧಿವೇಶನದಲ್ಲಿ ಕೆಲವು ಹೊಸ ಮತ್ತು ತಿದ್ದುಪಡಿ ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ.
ಅಧಿವೇಶನಕ್ಕೂ ಮುನ್ನ ಎಲ್ಲ ಪಕ್ಷಗಳು ಶಾಸಕಾಂಗ ಪಕ್ಷದ ಸಭೆ ನಡೆಸಿ ತಮ್ಮ ಕಾರ್ಯತಂತ್ರಗಳನ್ನು ರೂಪಿಸಿವೆ.

ಬಜೆಟ್ ಅಧಿವೇಶನ ಹಿನ್ನೆಲೆ ದಿಸ್ಪುರ್ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!