ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಸ್ಸಾಂ ವಿಧಾನಸಭಾ ಚುನಾವಣೆಯ ತಯಾರಿ ಜೋರಾಗಿ ನಡೆಯುತ್ತಿದ್ದು, ಹಣ, ಮದ್ಯಗಳ ಅಕ್ರಮ ಸಾಗಾಟವು ನಡೆಯುತ್ತಿದೆ. ಇಲ್ಲಿವರೆಗೆ ಅಸ್ಸಾಂ ರಾಜ್ಯದಲ್ಲಿ ಒಟ್ಟು 2.72 ಕೋಟಿ ದಾಖಲೆರಹಿತ ನಗದು ಮತ್ತು 1.1 ಕೋಟಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ 23 ದೂರುಗಳನ್ನು ಚುನಾವಣಾ ಆಯೋಗ ಸ್ವೀಕರಿಸಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಎಂಸಿಸಿ ನಿಯಮಗಳ ಉಲ್ಲಂಘನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು, ಫ್ಲೈಯಿಂಗ್ ಸ್ಕ್ವಾಡ್ಗಳು ಮತ್ತು ಸ್ಥಿರ ಕಣ್ಗಾವಲು ತಂಡಗಳು ನಗದು, ಬೆಲೆಬಾಳುವ ವಸ್ತುಗಳು, ಮದ್ಯ ಮತ್ತು ನಿಷೇಧಿತ ವಸ್ತುಗಳ ಸಾಗಿಸುವ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.