March 23, 2026
Monday, March 23, 2026
spot_img

ಕಾಂಗ್ರೆಸ್ ನಾಯಕರ ವಿರುದ್ದ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ, ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನನಷ್ಟ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಬರೆದಿದ್ದಾರೆ.

ನಾನು ಯಾವುದೇ ರಾಜಕೀಯ ಒತ್ತಡ ಅಥವಾ ಸಾರ್ವಜನಿಕ ದಾಳಿಗೆ ಹಿಂಜರಿಯುವುದಿಲ್ಲ. ಧೈರ್ಯವಿದ್ದರೆ, ಅವರ ಬಳಿ ಪುರಾವೆಗಳಿದ್ದರೆ ನ್ಯಾಯಾಲಯದ ಮುಂದೆ ಆರೋಪವನ್ನು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಅವರು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಹಿಮಂತ್ ಬಿಸ್ವಾ ಅವರ ಮೇಲೆ ಭ್ರಷ್ಟಾಚಾರ, ಅಕ್ರಮ ಆಸ್ತಿಗಳ ಆರೋಪ ಮಾಡಿದ್ದರು. ಅವರು ವೀಡಿಯೊಗಳ ಮೂಲಕ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !