ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಸ್ಸಾಂ ಸಿಎಂ: ದ್ವಿತೀಯ ಪಿಯುಸಿ ಪಾಸಾದವರಿಗೆ ಸಿಗುತ್ತೆ ಉಚಿತ ಸ್ಕೂಟರ್!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ರಾಜ್ಯದ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಅದೇನೆಂದರೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡುವುದಾಗಿ (Assam CM Himath Biswa) ಘೋಷಿಸಿದ್ದಾರೆ.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಲ್ಲಿ 60% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗಿಯರು ಮತ್ತು 75% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗರು ಈ ಉಚಿತ ಸ್ಕೂಟರ್ (Free Scooter) ಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದಿದ್ದಾರೆ.

ಈ ಸಂಬಂಧ ಅಸ್ಸಾಂ ಪ್ರವಾಸೋದ್ಯಮ ಸಚಿವ ಜಯಂತ್ ಮಲ್ಲಾ ಬರೂಹ್ ಪ್ರತಿಕ್ರಿಯಿಸಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸಲು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತ್ತಮ ಪ್ರವೇಶ ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!