ಹೊಸದಿಗಂತ ವರದಿ ಕೊಪ್ಪಳ:
ನಗರದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಅಸ್ಸಾಂ ಸಿಎಂ ಅವರನ್ನು ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಚಿವ ಆನಂದ್ ಸಿಂಗ್, ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬಳ್ಳಾರಿ ವಿಭಾಗದ ಪ್ರಭಾರಿ ಸಿದ್ದೇಶ್ ಯಾದವ್, ಸಹ-ಪ್ರಭಾರಿಗಳು ಚಂದ್ರಶೇಖರ್ ಪಾಟೀಲ್ ಹಲಗೇರಿ, ಕೊಪ್ಪಳ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಇದ್ದರು.