ಹೊಸದಿಗಂತ ಡಿಜಿಟಲ್ ಡೆಸ್ಕ್;
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಉಗ್ರರ ದಾಳಿಯ ನಂತರ ಪಾಕಿಸ್ತಾನ ಪರವಾಗಿ ಪೋಸ್ಟ್ ಗಳನ್ನು ಹಾಕಿದ ಆರೋಪದ ಅಸ್ಸಾಂ ನಲ್ಲಿ ಮೇಲೆ ಮತ್ತೆ ಮೂವರನ್ನು ಬಂಧಿಸಲಾಗಿದ್ದು, ಇದರೊಂದಿಗೆ ಈಶಾನ್ಯ ರಾಜ್ಯದಲ್ಲಿ ಒಟ್ಟು ಬಂಧಿತರ ಸಂಖ್ಯೆ 11ಕ್ಕೆ ತಲುಪಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ.
ಇನ್ನು ಈ ರೀತಿ ಕೃತ್ಯ ವೆಸಗುವವರ ವಿರುದ್ಧ ಅಗತ್ಯವಿದ್ದರೆ ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅಸ್ಸಾಂ ಸಿಎಂ ಎಚ್ಚರಿಕೆ ನೀಡಿದ್ದಾರೆ.
ನಾವು ಎಲ್ಲಾ(ಸಾಮಾಜಿಕ ಮಾಧ್ಯಮ) ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ರಾಷ್ಟ್ರ ವಿರೋಧಿ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.