ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರಕಾರದ ಕಾರ್ಯಾಚರಣೆ: 800ಕ್ಕೂ ಹೆಚ್ಚು ಜನರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾಲ್ಯ ವಿವಾಹದ (Child Marriage) ವಿರುದ್ಧ ಇಂದು ಅಸ್ಸಾಂನ (Assam) ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದ ಸರ್ಕಾರ ಎರಡನೇ ಹಂತದ ಕಾರ್ಯಾಚರಣೆ ನಡೆಸಿದ್ದು, ಕಾನೂನಿನ ವಿರುದ್ಧ ಅಪ್ರಾಪ್ತರ ಮದುವೆ ಮಾಡಿಸುತ್ತಿದ್ದ 800ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಪೋಸ್ಟ್ ಮಾಡಿರುವ ಹಿಮಂತ ಬಿಸ್ವಾ ಶರ್ಮಾ, ಈ ವರ್ಷದ ಆರಂಭದಲ್ಲಿ ಮೊದಲ ಸುತ್ತಿನ ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಸಾವಿರಾರು ಮಂದಿಯನ್ನು ಬಂಧಿಸಲಾಯಿತು. ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 3,907 ಜನರನ್ನು ಬಂಧಿಸಲಾಗಿದೆ. ಅವರಲ್ಲಿ 3,319 ಜನರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012ರ (POCSO) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಅಸ್ಸಾಂ ವಿಧಾನಸಭೆಗೆ ಶರ್ಮಾ ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!