ಅಸ್ಸಾಂ-ಮೇಘಾಲಯ ಘರ್ಷಣೆ: ನ್ಯಾಯಾಂಗ ತನಿಖೆಗೆ ಸಿಎಂ ಹಿಮಂತ ಬಿಸ್ವಾ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ-ಮೇಘಾಲಯ ಗಡಿಯಲ್ಲಿ ಪೊಲೀಸ್- ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.

ಜೊತೆಗೆ ಅಸ್ಸಾಂ ಸರ್ಕಾರವು ಮೃತ ಆರು ಜನರ ಮುಂದಿನ ಸಂಬಂಧಿಕರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಲು ನಿರ್ಧರಿಸಿದೆ.

ಈ ಕುರಿತು ಗುಜರಾತ್‌ನಲ್ಲಿ ಮಾತನಾಡಿದ ಅವರು, ನಾವು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇವೆ. ಪ್ರಕರಣವನ್ನು ಸಿಬಿಐಗೆ ವಹಿಸಿದ್ದೇವೆ. ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ ಮತ್ತು ಸ್ಥಳೀಯ ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಮಂಗಳವಾರ ಮುಂಜಾನೆ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ (ಪಶ್ಚಿಮ ಜೈನ್ತಿಯಾ ಹಿಲ್ಸ್) ಅಸ್ಸಾಂ-ಮೇಘಾಲಯ ಗಡಿಯಲ್ಲಿ ಅಕ್ರಮ ಮರವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದ ನಂತರ ಹಿಂಸಾಚಾರದಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ಆರು ಜನರು ಸಾವನ್ನಪಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!