ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಕರೀಂಗಂಜ್ನಲ್ಲಿ ಫೇಸ್ಬುಕ್ ಟೈಮ್ಲೈನ್ನಲ್ಲಿ ಪಾಕಿಸ್ತಾನ ಪರ ಘೋಷಣೆಯನ್ನು ಪೋಸ್ಟ್ ಮಾಡಿದ್ದಕ್ಕಾಗಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಎಂಡಿ ಮುಸ್ತಾಕ್ ಅಹ್ಮದ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಫೇಸ್ಬುಕ್ನಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಪೋಸ್ಟ್ ಮಾಡಿದ್ದಾನೆ. ಶುಕ್ರವಾರ ತಡರಾತ್ರಿ ಬಂಧನ ನಡೆದಿದ್ದು, ಆರೋಪಿ ಕರೀಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಕುತ್ ಗ್ರಾಮದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗಿದೆ.