ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಮೇಲೆ ವಿದೇಶಿ ಪಾಸ್ಪೋರ್ಟ್ ಹಾಗೂ ಕೋಟ್ಯಂತರ ರೂ. ಹಣ ಹೂಡಿಕೆ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಅಸ್ಸಾಂ ಪೊಲೀಸರ ತಂಡ ದೆಹಲಿಯಲ್ಲಿರುವ ಖೇರಾ ನಿವಾಸಕ್ಕೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಈ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಹಿಮಂತ ಬಿಸ್ವಾ ಶರ್ಮಾ, ಪೊಲೀಸರು ದೆಹಲಿಯಲ್ಲಿರುವ ಖೇರಾ ಅವರ ನಿವಾಸಕ್ಕೆ ಹೋಗಿದ್ದ ವೇಳೆ ಅಲ್ಲಿಂದ ಓಡಿಹೋಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ನಿನ್ನೆ ಗುವಾಹಟಿಯಿಂದ ಓಡಿಹೋದರು, ಹಾಗಾಗಿ ಇಂದು ಪೊಲೀಸರು ದೆಹಲಿಯಲ್ಲಿರುವ ಅವನ ನಿವಾಸಕ್ಕೆ ಹೋಗಿದ್ದಾರೆಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ, ಆದರೆ ಅಲ್ಲಿಂದ ಹೈದರಾಬಾದ್‌ಗೆ ಓಡಿಹೋಗಿದ್ದಾರೆ ಎಂದು ಹೇಳಿದ್ದಾರೆ.
ಇತ್ತ ಖೇರಾ ಆರೋಪವನ್ನು ಅಲ್ಲಗೆಳೆದಿರುವ ಸಿಎಂ ಶರ್ಮಾ ಅವರ ಪತ್ನಿ ,ಈ ಕುರಿತು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆ ಅಸ್ಸಾಂ ಪೊಲೀಸ್ ತಂಡವು ದೆಹಲಿ ಪೊಲೀಸರಿಗೆ ಮಾಹಿತಿ ವಿಚಾರಣೆ ನಡೆಸಲು ಖೇರಾ ನಿವಾಸಕ್ಕೆ ತೆರಳಿತ್ತು ಎನ್ನಲಾಗಿದೆ.



