ಅಸ್ಸಾಂನಲ್ಲಿ ಭಾರೀ ಪ್ರಮಾಣದಲ್ಲಿ ಮಾದಕ ದ್ರವ್ಯ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರೀ ಪ್ರಮಾಣದ ಮಾದಕ ದ್ರವ್ಯವನ್ನು ಅಸ್ಸಾಂ ಪೋಲೀಸರು ವಶಪಡಿಸಿಕೊಂಡಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಕೋಕ್ರಾಜಾರ್‌ ಜಿಲ್ಲೆಯ ಶ್ರೀರಾಂಪುರ ಪ್ರದೇಶದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ವೇಳೆ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟ್ರಕ್‌ ಒಂದರ ಆಯಿಲ್‌ ಟ್ಯಾಂಕ್‌ನಲ್ಲಿ ಗುಪ್ತವಾಗಿ ಸಾಗಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ. ಖಚಿತ ಮಾಹಿತಿಯ ಮೇರೆಗೆ ಪರಿಶೀಲನೆ ನಡೆಸಿದ ಪೋಲೀಸರು 3 ಕಿಲೋ ಹೆರಾಯಿನ್‌ ಮತ್ತು 85 ಕಿಲೊ ಓಪಿಯಮ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೋಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!