ಪೊನ್ನಂಪೇಟೆಯಲ್ಲಿ ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

ಹೊಸದಿಗಂತ ವರದಿ,ಮಡಿಕೇರಿ:

ಹುಲಿ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ಅಸ್ಸಾಂ ಮೂಲದ ಕಾರ್ಮಿಕ ಮಜೀದ್ ರೆಹಮಾನ್ (55) ಮೃತ ಕಾರ್ಮಿಕನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ಮಲಚೀರ ಅವಿನಾಶ್ ಎಂಬವರಿಗೆ ಸೇರಿದ ದನಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿ ಕುತ್ತಿಗೆ ಹಾಗೂ ತಲೆಭಾಗಕ್ಕೆ ಗಾಯಗೊಳಿಸಿದ ಪರಿಣಾಮ ರೆಹಮಾನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!