March 24, 2026
Tuesday, March 24, 2026
spot_img

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಕುರಿತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮೌನ ಮುರಿದಿದ್ದಾರೆ.

ಮಾನವ ನೈತಿಕತೆ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಎಲ್ಲಾ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಟೆಹ್ರಾನ್ ಅಧ್ಯಕ್ಷರಿಗೆ ನೀಡಿದ ತಮ್ಮ ಸಂದೇಶದಲ್ಲಿ ಕ್ರೆಮ್ಲಿನ್, ಇರಾನ್ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕ ಸಯ್ಯದ್ ಅಲಿ ಖಮೇನಿ ಮತ್ತು ಅವರ ಕುಟುಂಬದ ಸದಸ್ಯರ ಹತ್ಯೆಗೆ ಸಂಬಂಧಿಸಿದಂತೆ ನನ್ನ ಆಳವಾದ ಸಂತಾಪವನ್ನು ಸೂಚಿಸುತ್ತಿದ್ದೆನೆ, ಇದು ಮಾನವ ನೈತಿಕತೆ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಎಲ್ಲಾ ಮಾನದಂಡಗಳ ಸಿನಿಕತನದ ಉಲ್ಲಂಘನೆಯಾಗಿದೆ ಎಂದು ಸಂತಾಪ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !