ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ದಂಪತಿ ಇಂದು ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನಲ್ಲಿ ಹರ್ಷಿಕಾ ಹಾಗೂ ಭುವನ್ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಮಾತನಾಡಿದ್ದು, ಎಲೆಕ್ಷನ್ ಮುಗಿದ ನಂತರ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹರ್ಷಿಕಾ ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿರನ್ನು ಭೇಟಿಯಾಗಿ ತಮ್ಮ ಮೇಲಿನ ಹಲ್ಲೆ ಬಗ್ಗೆ ವಿವರಿಸಿದ್ದಾರೆ. ದೌರ್ಜನ್ಯದ ವಿಚಾರ ತಿಳಿದ್ಮೇಲೆ ಸಚಿವ ಪ್ರಹ್ಲಾದ್ ಜೋಶಿ ಕಾನೂನು ಕ್ರಮ ಜರುಗಿಸೋದಾಗಿ ದಂಪತಿಗೆ ಭರವಸೆ ನೀಡಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಯೂ ನಮಗೆ ಸಮಾಧಾನವಾಗುವಂಥ ಮಾತುಗಳನ್ನು ಆಡಿದ್ದರು. ಅವರಿಗೆ ಧನ್ಯವಾದ ತಿಳಿಸಲು ಬಂದಿದ್ದೇವೆ. ಹಾಗೇ ನೇಹಾ ಹಿರೇಮಠ ಅವರ ನಿವಾಸಕ್ಕೂ ತೆರಳುತ್ತೇವೆ ಎಂದಿದ್ದಾರೆ.