ಹಲ್ಲೆ, ಜೀವ ಬೆದರಿಕೆಯೊಡ್ಡಿದ ಕೇಸ್: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಹೊಸ ದಿಗಂತ ವರದಿ, ಮಂಗಳೂರು:

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಬ್ರಿಡ್ಜ್ ಬಳಿ ಕ್ಯಾಥೋಲಿಕ ಸಭಾಭವನ ವತಿಯಿಂದ ಅಕ್ಟೋಬರ್ 5 ರಂದು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್ ಅತಾವುಲ್ಲಾ(40), ಬಂಟ್ವಾಳದ ಫರಂಗಿಪೇಟೆ ಕುಂಜತ್ಕಲ್ ಹೌಸ್ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಚಿ(31) ಬಂಧಿತ ಆರೋಪಿಗಳು.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಬ್ರಿಡ್ಜ್ ಬಳಿ ಕ್ಯಾಥೋಲಿಕ ಸಭಾಭವನ ವತಿಯಿಂದ ಅಕ್ಟೋಬರ್ 5 ರಂದು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಆರೋಪಿ ಮೊಹಮ್ಮದ್ ಅತಾವುಲ್ಲಾ ಎಂಬಾತನನ್ನು ಅ. 07 ರಂದು, ಆರೋಪಿ ತೌಸೀರ್ ಎಂಬಾತನನ್ನು ಅ. 08 ರಂದು ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!