ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆಯಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ.
ಅನುಗೌಡ ತಮ್ಮ ತಂದೆ-ತಾಯಿ ಜೊತೆ ಕಾಸ್ಪಾಡಿಯಲ್ಲಿ ಜಮೀನು ನೋಡಲು ಬೆಂಗಳೂರಿನಿಂದ ಆಗಮಿಸಿದ್ದರು. ಈ ವೇಳೆ ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ ಮತ್ತು ಮೋಹನ್ ಎನ್ನುವರು ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ಅನುಗೌಡ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೋಹನ್ ಹಾಗೂ ಆತನ ತಾಯಿ ನೀಲಮ್ಮ ವಿರುದ್ಧ ಸಾಗರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಕಾಸ್ಪಡಿಯಲ್ಲಿರುವ ಜಮೀನನ್ನು ಅನುಗೌಡ ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದು, ಅನುಗೌಡ ಆಗಾಗ ಬೆಂಗಳೂರಿನಿಂದ ಬಂದು ಹೋಗುತ್ತಿದ್ದರು. ಆದರೆ ಜಮೀನು ವಿವಾದ ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.