ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ಮರಾಠಿಗರು ನಡೆಸಿದಂತ ದಾಳಿ ಸಂಬಂಧ ಮತ್ತೊಬ್ಬನನ್ನು ಬಂಧಿಸಲಾಗಿದೆ. 2 ದಿನಗಳ ಹಿಂದೆ ಕಂಡಕ್ಟರ್ ಮಹದೇವಪ್ಪ ದೂರು ದಾಖಲಿಸಿದ್ದರು. ಹೀಗಾಗಿ ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ(25) ಅರೆಸ್ಟ್ ಮಾಡಿದ್ದಾರೆ. ಸದ್ಯ ಮಾರಿಹಾಳ ಠಾಣೆ ಪೊಲೀಸರಿಂದ ಒಟ್ಟು ಐವರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಇತ್ತ ಕರ್ನಾಟಕ, ಮಹಾರಾಷ್ಟ್ರದಲ್ಲಿ ಮರಾಠಿ ಪುಂಡರಿಂದ ಭಾಷಾ ಕಿರಿಕ್ ಮುಂದುವರೆದಿದೆ. ಪುಣೆಯಲ್ಲಿ ಕರ್ನಾಟಕ ಸಾರಿಗೆ ಬಸ್ ತಡೆದು ಕಪ್ಪು ಮಸಿಯಿಂದ ಜೈ ಮಹಾರಾಷ್ಟ್ರ ಬರೆದು ಪುಂಡಾಟಿಕೆ ಮೆರೆದಿದ್ದಾರೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮಹಾರಾಷ್ಟ್ರಕ್ಕೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಗೂಂಡಾಗಿರಿಯನ್ನು ಎಂಇಎಸ್ ಮುಖಂಡ ಶುಭಂ ಶಳಕೆ ಸಮರ್ಥಸಿಕೊಂಡಿದ್ದಾನೆ. ಕನ್ನಡಪರ ಹೋರಾಟಗಾರರು ನಾಲಾಯಕ ಎಂದು ಎಂಇಎಸ್ ಮುಖಂಡನ ಬೆಳಗಾವಿ ನೆಲದಲ್ಲಿ ನಿಂತುಕೊಂಡೇ ನಾಲಿಗೆ ಹರಿ ಬಿಟ್ಟಿದ್ದಾರೆ.
ಎಂಇಎಸ್ ಮುಖಂಡ ಶುಭಂ ಶಳಕೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಕಂಡಕ್ಟರ್ ಬಾಲಕಿ ಜೊತೆಗೆ ಅಸಭ್ಯ ವರ್ತನೆ ಮಾಡಿದ್ದಾನೆ. ಅದಕ್ಕೆ ಪೊಲೀಸರು ಪೋಕ್ಸೋ ಕೇಸ್ ಹಾಕಿದ್ದಾರೆ. ಇಂತಹ ನೀಚ, ನಾಲಾಯಕ ಕಂಡಕ್ಟರ್, ಇಂತಹ ಕಂಡಕ್ಟರ್ ಪರ ನಿಂತ ಕನ್ನಡ ಪರ ಸಂಘಟನೆಗಳು ಸಹ ನಾಲಾಯಕರು ಅಂತಾ ಪುಂಡಾಟಿಕೆ ಪ್ರದರ್ಶನ ಮಾಡಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಪುಂಡಾಟಿಕೆಗೆ ಕಡಿವಾಣ ಇಲ್ಲದಂತಾಗಿದೆ. ಕನ್ನಡದ ನೆಲದ ಮೇಲೆ ನಿಂತು ಕನ್ನಡಿಗರನ್ನ ನಿಂದಿಸುವ ಇಂತಹ ನಾಡದ್ರೋಹಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹ ಕೇಳಿ ಬರುತ್ತಿದೆ.