ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಮಹಿಳಾ ವೈದ್ಯೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ವತ್ರೆಯಲ್ಲಿನ ಕ್ಯಾಶುಲಿಟಿ ವಾರ್ಡ್ ನಲ್ಲಿ ವ್ಯಕ್ತಿಯೊಬ್ಬರ ಕಿವಿಯಿಂದ ಸುರಿಯುತ್ತಿದ್ದ ರಕ್ತವನ್ನು ಸ್ವಚ್ಛಗೊಳಿಸುತ್ತಿದ್ದ ಡಾಕ್ಟರ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ರೋಗಿಯೊಂದಿಗೆ ಬಂದಿದ್ದವರಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮಹಾರಾಷ್ಟ್ರ ಆರೋಗ್ಯ ಸೇವಾ ವ್ಯಕ್ತಿಗಳು ಸೇವಾ ಸಂಸ್ಥೆಗಳಲ್ಲಿ ಹಿಂಸಾಚಾರ ಮತ್ತು ಹಾನಿ ಅಥವಾ ಆಸ್ತಿ ನಷ್ಟ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕುಡಿದ ಅಮಲಿನಲ್ಲಿದ್ದ 5-6 ಜನರ ಗುಂಪು ಬೆದರಿಸಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದೆ. ತನ್ನನ್ನು ತಾನು ರಕ್ಷಿಸಿಕೊಳ್ಳುವಾಗ ಆಕೆಗೂ ಗಾಯಗಳಾಗಿವೆ ಎಂದು ಸಿಯೋನ್ ಆಸ್ಪತ್ರೆ ತಿಳಿಸಿದೆ.